ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆಬಂದರೂ ಇನ್ನೂ ಬಿಜೆಪಿ ವಿಪಕ್ಷ ನಾಯಕನ ಆಯ್ಕೆಯ ಗೊಂದಲದಲ್ಲಿದ್ದು, ಈ ಮಾಜಿ ಪ್ರಧಾನಿ ,ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅದೇನೆಂದರೆ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುತ್ತಾರೆ ಎಂದು ಹೆಸರುಗಳು ಘೋಷಣೆ ಮಾಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಸಿ.ಟಿ.ರವಿ (CT Ravi) ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಇದೇ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಕೂಡ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದರು.