ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರೆಂಬ ಚರ್ಚೆಗಳು ಕೂಡ ಶುರುವಾಗಿದೆ. ನಾಯಕತ್ವಕ್ಕಾಗಿ ನಾಲ್ವರು ಆಟಗಾರರ ನಡುವೆ ನೇರ ಪೈಪೋಟಿ ಇದೆ.
ಭಾರತ ಟಿ20 ಹಾಗೂ ಏಕದಿನ ತಂಡಗಳ ಉಪನಾಯಕರಾಗಿರುವ ಶುಭ್ಮನ್ ಗಿಲ್ ಟೆಸ್ಟ್ ತಂಡದ ನಾಯಕತ್ವದ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ಗಿಲ್ಗೆ ಕ್ಯಾಪ್ಟನ್ ಪಟ್ಟ ನೀಡುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ. ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈಗಾಗಲೇ ಭಾರತ ತಂಡವನ್ನು ಟೆಸ್ಟ್ನಲ್ಲಿ ಮುನ್ನಡೆಸಿದ್ದಾರೆ. ಅಲ್ಲದೆ ಅವರು ಪ್ರಸ್ತುತ ಟೆಸ್ಟ್ ತಂಡದ ಉಪನಾಯಕ. ಅವರಿಗೆ ನಾಯಕತ್ವ ಲಭಿಸಿದರೂ ಅಚ್ಚರಿಪಡಬೇಕಿಲ್ಲ.
ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಈ ಹಿಂದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಹೀಗಾಗಿ ಕನ್ನಡಿಗನಿಗೆ ನಾಯಕತ್ವ ಲಭಿಸುವ ಸಾಧ್ಯತೆಯಿದೆ. ಭಾರತ ವೈಟ್ ಬಾಲ್ ತಂಡಗಳನ್ನು ಮುನ್ನಡೆಸಿದ ಅನುಭವ ಹೊಂದಿರುವ ರಿಷಭ್ ಪಂತ್ ಕೂಡ ನಾಯಕತ್ವದ ರೇಸ್ನಲ್ಲಿದ್ದಾರೆ. ಅದರಲ್ಲೂ ವಿಕೆಟ್ ಕೀಪರ್ಗೆ ಕ್ಯಾಪ್ಟನ್ಸಿ ವಹಿಸಲು ಮುಂದಾದರೆ ಪಂತ್ಗೆ ನಾಯಕತ್ವ ಒಲಿಯಲಿದೆ. ಹೀಗಾಗಿಯೇ ಈ ಬಾರಿ ಟೆಸ್ಟ್ ತಂಡದ ಸಾರಥ್ಯ ಯಾರಿಗೆ ಸಿಗಲಿದೆ ಎಂಬುದೇ ಕುತೂಹಲ.