January21, 2026
Wednesday, January 21, 2026
spot_img

ಮುಂದಿನ ಸಿಜೆಐ ಯಾರು? ಉತ್ತರಾಧಿಕಾರಿ ಹೆಸರು ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಕಾನೂನು ಸಚಿವಾಲಯಕ್ಕೆ ಈ ಶಿಫಾರಸು ಮಾಡಿದ್ದಾರೆ.

ಸಿಜೆಐ ಬಿ.ಆರ್. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.

ಸರ್ಕಾರದಿಂದ ಅಧಿಸೂಚನೆ ಬಂದ ನಂತರ, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಮತ್ತು ಫೆಬ್ರವರಿ 9, 2027 ರಂದು ನಿವೃತ್ತರಾಗುವವರೆಗೆ ಸೇವೆ ಸಲ್ಲಿಸಲಿದ್ದಾರೆ. ಅಂದರೆ ಸುಮಾರು 14 ತಿಂಗಳ ಕಾಲ ಸೂರ್ಯಕಾಂತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿರಲಿದ್ದಾರೆ.

ಸಾಂಪ್ರದಾಯಿಕವಾಗಿ, ಹಾಲಿ ಸಿಜೆಐ 65 ವರ್ಷ ವಯಸ್ಸನ್ನು ತಲುಪಿದ ನಂತರ ನಿವೃತ್ತರಾಗುವ ಒಂದು ತಿಂಗಳ ಮೊದಲು ತಮ್ಮ ಉತ್ತರಾಧಿಕಾರಿಯ ಹೆಸರನ್ನು ಶಿಫಾರಸ್ಸು ಮಾಡಿ ಪತ್ರವನ್ನು ಕಳುಹಿಸುತ್ತಾರೆ.

Must Read