ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು 135 ಸ್ಥಾನವನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಗಳಿಸಿದೆ. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಸಿಎಂ ಆಯ್ಕೆ ಕುರಿತಂತೆ ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಆ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಕ್ಕಾಗಿ ಮೂವರು ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
ರಾಜ್ಯಕ್ಕೆ ಈಗಾಗಲೇ ವೀಕ್ಷಕರನ್ನು ಕಳುಹಿಸಿದ್ದೇವೆ. ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ, ದೆಹಲಿಗೆ ಮರಳಿ ಬಂದು, ಕಾಂಗ್ರೆಸ್ ಹೈಕಮಾಂಡ್ ಮುಂದೆ ಅಭಿಪ್ರಾಯವನ್ನು ಇಡಲಿದ್ದಾರೆ. ಶಾಸಕರ ಅಭಿಪ್ರಾಯದ ಬಗ್ಗೆ ಹೈಕಮಾಂಡ್ ಚರ್ಚಿಸಿ ಮುಂದಿನ ಸಿಎಂ ಯಾರು ಎನ್ನುವುದನ್ನು ಘೋಷಣೆ ಮಾಡಲಿದೆ ಎಂಬುದಾಗಿ ತಿಳಿಸಿದರು.