Wednesday, August 17, 2022

Latest Posts

ಯಾರಾಗಲಿದ್ದಾರೆ ಗುಜರಾತ್ ನ ಮುಂದಿನ ಸಿಎಂ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿಯಿರುವಾಗಲೇ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಮುಂದಿನ ಸಿಎಂ ಯಾರೆಂಬುದು ಚರ್ಚೆ ಶುರುವಾಗಿದೆ.
ಉತ್ತರಾಖಂಡ, ಕರ್ನಾಟಕದ ಬಳಿಕ ಇದೀಗ ಗುಜರಾತ್ ಮುಖ್ಯಮಂತ್ರಿ ಬದಲಾವಣೆ ಮಾಡಿದ್ದು, ಬಿಜೆಪಿ ಹೈಕಮಾಂಡ್ ದಿಢೀರ್ ರಾಜಕೀಯ ಸಂಚಲನವನ್ನು ಸೃಷ್ಟಿಸುತ್ತಿದೆ. 2022ರ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ರಾಜೀನಾಮೆ ಕೊಡಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬೆನ್ನಲ್ಲೇ ಗುಜರಾತ್ ಮುಖ್ಯಮಂತ್ರಿ ಹುದ್ದೆಗೆ ಪ್ರಮುಖವಾಗಿ ಎರಡು ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ, ಪುರುಷೋತ್ತಮ್ ರೂಪಾಲಿ ಹೆಸರು ಸಿಎಂ ರೇಸ್ ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿದ್ದು, ಇವರೊಂದಿಗೆ ನಿತಿನ್ ಪಟೇಲ್, ಸಿಆರ್ ಪಟೇಲ್, ಆರ್ ಸಿ ಫಾಲ್ಡು ಅವರ ಹೆಸರುಗಳು ಕೂಡ ಚರ್ಚೆಯಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!