ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದರ ನಡುವೆ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ? ಎಂಬ ಚರ್ಚೆ ಶುರುವಾಗಿದೆ. ಬಹುತೇಕರು ನರೇಂದ್ರ ಮೋದಿ ಅವರೇ 3ನೇ ಅವಧಿಗೂ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎನ್ನುತ್ತಿದ್ದಾರೆ.
ಇನ್ನು ಕೆಲವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರದ ಪ್ರಧಾನಿ ಅಭ್ಯರ್ಥಿ ಎಂದು ಕರೆಯುತ್ತಿದ್ದಾರೆ.
ಈ ಬಗ್ಗೆ ಖುದ್ದು ಸಿಎಂ ಯೋಗಿ ಆದಿತ್ಯನಾಥ್ ಖಾಸಗಿ ನ್ಯೂಸ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ನನಗೆ ಉತ್ತರ ಪ್ರದೇಶದಲ್ಲೇ ಉಳಿಯುವ ಆಸೆಯಿದೆ. ಪ್ರಧಾನಿ ಮೋದಿ ನಮ್ಮ ದೇಶದ ದೊಡ್ಡ ಶಕ್ತಿ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಹೊಸ ಗುರುತನ್ನು ಹೊಂದಿದೆ. ಯಾವುದೇ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಹೆಸರು ದೊಡ್ಡದಾಗಿರುತ್ತದೆ. 2014ರಲ್ಲಿ ಅವರು ಪ್ರಧಾನಿಯಾದ ನಂತರ ಸಮಾಜದ ಪ್ರತಿಯೊಂದು ವರ್ಗವೂ ಪ್ರಯೋಜನ ಪಡೆದಿದೆ. ಸಾರ್ವಜನಿಕರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
2024ರಲ್ಲಿ ಬಿಜೆಪಿ ಮತ್ತೊಮ್ಮೆ ಬಹುಮತ ಪಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 300ರಿಂದ 315 ಲೋಕಸಭಾ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದಿದ್ದಾರೆ.