ಯಾರಿಗೆಲ್ಲಾ ಸಿಗುತ್ತೆ ಬಿಜೆಪಿ ಟಿಕೆಟ್​?: ದೆಹಲಿಯಿಂದ ಬಂದ ಅಶೋಕ್ , ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ( Loksabha Elections 2024) ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವ ಕ್ಷೇತ್ರವನ್ನು ಬಿಜೆಪಿ ಹೈಕಮಾಂಡ್ ಪರಿಗಣಿಸಿರಲಿಲ್ಲ.

ಇಂದು (ಮಾರ್ಚ್ 12) ರಾತ್ರಿ ಅಥವಾ ನಾಳೆ(ಮಾ.13) ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ ಆಗುತ್ತಿದೆ. ಆದ್ರೆ, ಯಾರಿಗೆಲ್ಲಾ ಟಿಕೆಟ್​ ಸಿಗುತ್ತೆ? ಯಾರಿಗೆ ಸಿಗಲ್ಲ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ಮುಗಿಸಿ ದೆಹಲಿಯಿಂದ ವಾಪಸ್ ಬೆಂಗಳೂರಿಗೆ ಆಗಮಿಸಿದ್ದು, ಸಭೆಯಲ್ಲಿ ಏನೆಲ್ಲಾ ಆಯ್ತು? ಯಾರಿಗೆ ಟಿಕೆಟ್? ಯಾವಾಗ ಪಟ್ಟಿ ಬಿಡುಗಡೆಯಾಗುತ್ತೆ ಎನ್ನುವುದರ ಬಗ್ಗೆ ಅಪ್ಡೇಟ್ ನೀಡಿದ್ದಾರೆ.​

ಅಶೋಕ್ ಹೇಳಿದ್ದೇನು?
ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕೆಲ ಕ್ಷೇತ್ರದ ಟಿಕೆಟ್​ ಪೆಂಡಿಂಗ್ ಆಗಿವೆ. ಇನ್ನೂ ಕೆಲವು ಮಾತುಕತೆ ಹಂತದಲ್ಲಿದ್ದು, ಇಂದು ಅಥವಾ ನಾಳೆಯೊಳಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಹಿತಿ ನೀಡಿದರು.

ಗೆಲ್ಲುವ ಮಾನದಂಡದ ಮೇಲೆ ಅಭ್ಯರ್ಥಿಗಳಿಗೆ ಟಿಕೆಟ್​ ತೀರ್ಮಾನ ಮಾಡುತ್ತಿದ್ದಾರೆ. ಹೊಸ ಮುಖಗಳಿಗೂ ಅವಕಾಶ ಕೊಟ್ಟಿದ್ದಾರೆ, ಹಳಬರಿಗೂ ಅವಕಾಶವಿದೆ. ಹಾಲಿ ಸಂಸದರ ಕಾರ್ಯವೈಖರಿ ಬಗ್ಗೆಯೂ ಚರ್ಚೆ ಆಗಿದೆ. ಟಿಕೆಟ್​ ವಿಚಾರವಾಗಿ ಹೈಕಮಾಂಡ್​ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

4-5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳ ಟಿಕೆಟ್ ಫೈನಲ್
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಮಾತನಾಡಿ, ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ. ನಾಳೆ ಅಥವಾ ನಾಡಿದ್ದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಮೊದಲ ಸಭೆಯಲ್ಲಿ ಚರ್ಚೆಯಾಗಿ ಹೆಸರುಗಳು ಶಾರ್ಟ್​ಲಿಸ್ಟ್ ಆಗಿತ್ತು. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ನಡ್ಡಾ ಮತ್ತೊಮ್ಮೆ ಪರಾಮರ್ಶಿಸಿದ್ದಾರೆ. 4 ರಿಂದ 5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳ ಟಿಕೆಟ್ ಫೈನಲ್ ಆಗಿದೆ. ಮೈತ್ರಿ ಪಕ್ಷಕ್ಕೆ ಕ್ಷೇತ್ರ ಹಂಚಿಕೆ ಬಗ್ಗೆ ವರಿಷ್ಠರೇ ತೀರ್ಮಾನ ಮಾಡುತ್ತಾರೆ. ರಾಜಕಾರಣದಲ್ಲಿ ಯಾವುದೂ ಕಷ್ಟವಿಲ್ಲ, ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ವಿರೋಧಿಗಳ ರಣನೀತಿ ಮೇಲೆ ನಾವು ಕೆಲವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!