ಯಾರ ಪಾಲಾಗಲಿದೆ ಬಿಲ್ಲು -ಬಾಣ?: ಆ.1 ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಶಿವಸೇನೆಯಯನ್ನು ನಮಗೆ ನೀಡಬೇಕೆಂದು ಕೋರಿ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರ ಪೀಠದ ಠಾಕ್ರೆ ಬಣದ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಚುನಾವಣಾ ಆಯೋಗದ ಮುಂದಿರುವ ವಿಚಾರಣಾ ಪ್ರಕ್ರಿಯೆಗಳು, ಇಲ್ಲಿನ ಪ್ರಸ್ತುತ ವಿಚಾರಣೆಗಳ ಮೇಲೆ ಪರಿಣಾಮ ಬೀರುವುದರಿಂದ ಅವನ್ನು ತಡೆಯುವುದು ಅಗತ್ಯ ಎಂದು ಪ್ರತಿಪಾದಿಸಿದರು.

ಬಾಕಿ ಇರುವ ಅರ್ಜಿಗಳೊಂದಿಗೆ ಈ ಅರ್ಜಿಯನ್ನೂ ಸೇರಿಸಿ ಆಗಸ್ಟ್​ 1 ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ಇತ್ತೀಚೆಗೆ ಚುನಾವಣಾ ಆಯೋಗ ಶಿವಸೇನೆಯ ಚಿಹ್ನೆಯಾದ ಬಿಲ್ಲು ಮತ್ತು ಬಾಣದ ಗುರುತು ತಮ್ಮದೆಂದು ಸಾಬೀತು ಪಡಿಸುವ ದಾಖಲೆಗಳನ್ನು ಸಲ್ಲಿಸುವಂತೆ ಠಾಕ್ರೆ ಮತ್ತು ಶಿಂದೆ ಬಣಕ್ಕೆತಿಳಿಸಿತ್ತು. ಶಿವಸೇನೆ ಶಾಸಕಾಂಗ ಪಕ್ಷ ಹಾಗೂ ಪಕ್ಷದ ಪದಾಧಿಕಾರಿಗಳ ಲಿಖಿತ ಹೇಳಿಕೆಗಳನ್ನು ಕೂಡ ಸಲ್ಲಿಸುವಂತೆ ಆಯೋಗ ಎರಡೂ ಬಣಗಳಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!