ಈ ಬಾರಿ ಕೆಂಪುಕೋಟೆಯಲ್ಲಿನ ಪ್ರಧಾನಿ ಮೋದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಯಾರೆಲ್ಲ ಸಾಕ್ಷಿಯಾಗಲಿದ್ದಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 77ನೇ ಸ್ವಾತಂತ್ಯ ದಿನಾಟರಣೆ ಆಚರಿಸಲಿದ್ದಾರೆ. ಈ ಬಾರಿ ಕೆಂಪು ಕೋಟೆ ಸ್ವಾತಂತ್ರ್ಯ ದಿನಾಚರಣೆಗೆ 1,800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ರೈತರು, ಮೀನುಗಾರರು, ಕಾರ್ಮಿಕರು, ಶಿಕ್ಷಕರು ಸೇರಿದಂತೆ 1,800 ಜನರನ್ನು, ಅವರ ಕುಟುಂಬದೊಂದಿಗೆ, ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಈ ಬಾರಿ ಜನ ಭಾಗೀದಾರಿ ಪರಿಕಲ್ಪನೆಯಡಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.

660 ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400 ಕ್ಕೂ ಹೆಚ್ಚು ಸರಪಂಚರನ್ನು ಒಳಗೊಂಡಿದ್ದಾರೆ. ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಮಂದಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ತಲಾ 50 ಮಂದಿಗೆ ಆಹ್ವಾನ ನೀಡಲಾಗಿದೆ. ಇನ್ನು ಹೊಸ ಸಂಸತ್ತಿನ ಕಟ್ಟಡ ಸೇರಿದಂತೆ ಕೇಂದ್ರ ವಿಸ್ಟಾ ಯೋಜನೆಯ 50 ಶ್ರಮ ಯೋಗಿಗಳು (ನಿರ್ಮಾಣ ಕೆಲಸಗಾರರು), ಖಾದಿ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಮತ್ತು ತಲಾ 50 ಪ್ರಾಥಮಿಕ ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಆಹ್ವಾನಿತರ ಜೊತೆಗೆ ಪ್ರತಿ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶದಿಂದ ಎಪ್ಪತ್ತೈದು ದಂಪತಿಗಳನ್ನು ಅವರ ಸಾಂಪ್ರದಾಯಿಕ ಉಡುಗೆಯಲ್ಲಿ, ಕೆಂಪು ಕೋಟೆಯಲ್ಲಿ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್, ವಿಜಯ್ ಚೌಕ್, ನವದೆಹಲಿ ರೈಲು ನಿಲ್ದಾಣ, ಪ್ರಗತಿ ಮೈದಾನ, ರಾಜ್ ಘಾಟ್, ಜಾಮಾ ಮಸೀದಿ ಮೆಟ್ರೋ ನಿಲ್ದಾಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ದೆಹಲಿ ಗೇಟ್ ಮೆಟ್ರೋ ನಿಲ್ದಾಣ, ITO ಮೆಟ್ರೋ ಗೇಟ್, ನೌಬತ್ ಖಾನಾ ಮತ್ತು ಶೀಶ್ ಗಂಜ್ ಗುರುದ್ವಾರ ಸೇರಿದಂತೆ 12 ಸ್ಥಳಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಮೀಸಲಾದ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!