ಯಾರು ಬೇಕಾದ್ರೂ ಸಿಎಂ ಆಗಲಿ, ನನಗೆ ಬೇಕಿರುವುದು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು: ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಗಳಾಗಿ, ಅದು ನನಗೆ ಬೇಕಾಗಿಲ್ಲ. ನನಗೆ ಬೇಕಿರುವುದು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್​ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
ಕೋಲಾರದಲ್ಲಿಂದು ನಡೆದ ಕಾಂಗ್ರೆಸ್​ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ್ ಜೋಡೋ ಯಾತ್ರೆಯ ಮೂಲಕ ಸಂಚರಿಸಿ ಜನರ ದು:ಖ ದುಮ್ಮಾನಗಳನ್ನು ಕೇಳಿದ್ದಾರೆ. ಬಂಗಾರದ ಜಿಲ್ಲೆ ಕೋಲಾರ. ಇಡೀ ದೇಶದಲ್ಲಿ ಮೂರೇ ಮೂರು ಬಂಗಾರ ಗಣಿಗಳಿವೆ. ಅದರಲ್ಲಿ ಮೂರೂ ಕೂಡಾ ಕರ್ನಾಟಕದಲ್ಲಿವೆ‌. ಬರಗಾಲಕ್ಕೆ ತುತ್ತಾದ ಈ ಜಿಲ್ಲೆಗೆ ಈ ಕಡೆ ನೀರಾವರಿವಾಗಲೀ, ಕೃಷಿಗಾಗಲೀ ಸರ್ಕಾರ ಅಷ್ಟೊಂದು ಮಹತ್ವ ನೀಡುತ್ತಿರಲಿಲ್ಲ‌. ಆದರೆ ನಮ್ಮ‌ ಸರ್ಕಾರ ಬಂದ ಮೇಲೆ ಕೆ.ಸಿ.ವ್ಯಾಲಿ ನೀರಿನ ಯೋಜನೆ ಮಾಡಿದರು. ಈ ಕೆಲಸ ಮಾಡಿದ್ದಕ್ಕಾಗಿ ಇಂದು ನೂರಾರು ಕೆರೆಗಳು ತುಂಬಿವೆ. ಲಕ್ಷಾಂತರ ಎಕರೆ ಕೃಷಿ ಮಾಡುತ್ತಿದ್ದಾರೆ ಎಂದರು.

‘ಯಾರೇ ಮುಖ್ಯಮಂತ್ರಿಗಳಾಗಿ ನನಗೆ ಬೇಕಾಗಿಲ್ಲ’
ನೀವು ಯಾರೇ ಮುಖ್ಯಮಂತ್ರಿಗಳಾಗಿ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ಕಾಂಗ್ರೆಸ್​ ಪಾರ್ಟಿ ಅಧಿಕಾರಕ್ಕೆ ಬರಬೇಕು. ನೀವು ಸಿಎಂ ಸ್ಥಾನದ ಕುರಿತು ತಲೆಕೆಡಿಸಿಕೊಳ್ಳಬೇಡಿ, ಜನ ತೀರ್ಮಾನ ಮಾಡ್ತಾರೆ‌, ಎಲ್ಲರೂ ಕೈಗೂಡಿದರೆ ಮಾತ್ರ ಆಗುತ್ತದೆ. ಒಂದು ಕೈನಲ್ಲಿ ಚಪ್ಪಾಳೆ ತಟ್ಟಲು ಆಗುವುದಿಲ್ಲ ಎಂದು ವೇದಿಕೆ ಮೇಲಿದ್ದ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಪರೋಕ್ಷವಾಗಿ ಕಿವಿಮಾತು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!