ರಾಜಭವನಕ್ಕೆ ಯಾರೇ ಬಂದ್ರು ಅವರಿಗೆ ಶಾಖಾಹಾರವೇ ಊಟ: ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಭವನದಲ್ಲಿ ಮಾಂಸಾಹಾರ ಸಂಪೂರ್ಣ ನಿಷೇಧಿಸಲಾಗಿದೆ. ಆಹಾರ ಪದಾರ್ಥದಲ್ಲಿ ನಾವು ಕಟ್ಟುನಿಟ್ಟು ಪಾಲಿಸುತ್ತೇವೆ.ಯಾರೇ ಬಂದರೂ ಶಾಖಾಹಾರವನ್ನೇ ಉಣಬಡಿಸುತ್ತೇವೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಹೇಳಿದ್ದಾರೆ.

ಶ್ರವಣಬೆಳಗೊಳದಲ್ಲಿ ಭಗವಾನ್ ಮಹಾವೀರರ 2624ನೇ ಜನ್ಮ ಕಲ್ಯಾಣೋತ್ಸವದಲ್ಲಿ ಮಾತನಾಡಿ, ಜೈನ ಧರ್ಮ ಅಹಿಂಸೆ ಪ್ರತಿಪಾದಿಸುತ್ತದೆ. ಹಾಗಿದ್ದಾಗ ಈ ಕ್ಷೇತ್ರದ ಸುತ್ತಲೂ ಮಾಂಸ ಹಾಗೂ ಮದ್ಯದ ಮಾರಾಟ ಹೆಚ್ಚಾಗಿದ್ದು ವಿಷಾದನೀಯ, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸರ್ಕಾರದ ಜೊತೆ ಮಾತನಾಡುವಂತೆ ಸಮಾರಂಭದಲ್ಲಿದ್ದ ಸಚಿವ ಡಿ.ಸುಧಾಕರ್ ಅವರಿಗೆ ಸೂಚಿಸಿದರು.

ಜೈನ ಧರ್ಮವು ಪ್ರಾಚೀನ ಕಾಲದಿಂದಲೂ ಸಹ ಕ್ಷಮಾಧರ್ಮ ಮಾರ್ಗದಲ್ಲಿ ಸಾಗಿದ್ದು, ಸಹಬಾಳ್ವೆಯಂತೆ ಎಲ್ಲರೊಂದಿಗೂ ಬದುಕು, ಬದುಕಲು ಬಿಡು ಎಂಬ ಮಹಾವೀರರ ವಾಣಿ ಪ್ರಸ್ತುತ ಅಗತ್ಯವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!