Wednesday, September 27, 2023

Latest Posts

ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸ್ವಾಗತ: ಸಿಎಂ ಸಿದ್ದರಾಮಯ್ಯರಿಂದ ಬಹಿರಂಗ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು ಅವರಿಗೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ದಿವಾಳಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳು ಪೂರೈಸಿದೆ. ಇದುವರೆಗೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯೇ ಇವರನ್ನು ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇಂದಿನಿಂದ ಮೂರು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಸಹ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!