ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತ ಬಾಲಕಿ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೋಗಿದ್ದ ಸಂದರ್ಭ ಬಾಲಕಿ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು.
ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಎರಡು ದಿನದ ಹಿಂದಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇಂದು ಮತ್ತೆ ಮೈಮೆಲೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಕಿಮ್ಸ್ಗೆ ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.