September 27, 2026
Sunday, September 27, 2026
spot_img

ಯುಪಿಯಲ್ಲಿ ಮುಸ್ಲಿಮರಿಗೆ ಟಿಕೆಟ್ ಇಲ್ಲವೇಕೆ?: ಕಮಲ ಪಡೆಗೆ ಅಶೋಕ್ ಗೆಹ್ಲೋಟ್ ನೇರ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಇತ್ತೀಚಿನ ಹೇಳಿಕೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇಂದಿರಾ ಗಾಂಧಿ ಇದ್ದರೆ ಬಿಜೆಪಿ ಬ್ಯಾನ್!

“ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ದೇಶದ ಸದ್ಯದ ಪರಿಸ್ಥಿತಿಯನ್ನು ನೋಡಿ ಬಿಜೆಪಿಯನ್ನು ನಿಷೇಧಿಸುತ್ತಿದ್ದರು” ಎಂದು ಗೆಹ್ಲೋಟ್ ಹೇಳಿದ್ದಾರೆ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಅಪಾಯಕಾರಿ ವಾತಾವರಣವನ್ನು ಎಂದೂ ನೋಡಿಲ್ಲ ಎಂದ ಅವರು, ದೇಶದ ಜನತೆ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ವಿರುದ್ಧ ಹಿಂದುತ್ವ ರಾಜಕಾರಣದ ಆರೋಪ

ಉತ್ತರ ಪ್ರದೇಶ ಚುನಾವಣೆಯನ್ನು ಉದಾಹರಿಸಿದ ಗೆಹ್ಲೋಟ್, ಬಿಜೆಪಿ ಒಬ್ಬೇ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ನೀಡದಿರುವುದನ್ನು ಬಲವಾಗಿ ಖಂಡಿಸಿದರು. ಅಲ್ಲಿ ಕನಿಷ್ಠ ಐದು ಕ್ಷೇತ್ರಗಳಲ್ಲಾದರೂ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬಹುದಿತ್ತು. ಕೇವಲ ಹಿಂದುತ್ವದ ಅಜೆಂಡಾ ಹಾಗೂ ಹಿಂದೂಗಳ ಹೆಸರಿನಲ್ಲಿ ಮಾತ್ರ ರಾಜಕಾರಣ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

Must Read