ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊರೋನಾದಿಂದ ಅನಾಥರಾದ ಮಕ್ಕಳ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಈ ಮೂಲಕ ಅನಾಥ ಮಕ್ಕಳ ವಿಚಾರದಲ್ಲಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಕಿಡಿಕಾರಿದ್ದಾರೆ.
ಸುಪ್ರೀಂ ಕೋರ್ಟ್ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಮಾಹಿತಿ ಹಲೆಹಾಕಿ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವಂತೆ ಆದೇಶ ನೀಡಿದೆ. ಆದರೆ ಮಮತಾ ಬ್ಯಾನರ್ಜಿ ಈ ಆದೇಶವನ್ನ ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಇಲಾಖೆ ಸಚಿವ ಹರ್ಷವರ್ಧನ್ , ದೀದಿ ಎಂದರೆ ವಾತ್ಸಲ್ಯ, ತ್ಯಾಗ ಮತ್ತು ಪ್ರೀತಿಯ ಪ್ರತೀಕ. ಆದ್ರೆ ಯಾಕೆ ಈ ದೀದಿ ತುಂಬಾ ಕ್ರೂರಿ? ಅನಾಥ ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳನ್ನ ಯಾಕೆ ದೂರ ಮಾಡುತ್ತಿದ್ದೀರ? ಮಕ್ಕಳ ಜೀವಗಳ ಜೊತೆಗೆ ಕೊಳಕು ರಾಜಕೀಯ ಸರಿಯಲ್ಲ ಎಂದಿದ್ದಾರೆ.