ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ (Prajwal Revanna) ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ (Rahul Gandhi), ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ನಾಚಿಕೆಗೇಡಿನ ಮೌನವನ್ನು ಹೊಂದಿದ್ದಾರೆ. ಪ್ರಧಾನಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣುಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡ ಎಂದು ಪ್ರಶ್ನಿಸಿದ್ದಾರೆ.
ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣುಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ಮೋದಿ ಕಾ ಪರಿವಾರ್ ಭಾಗವಾಗುವುದು ಅಪರಾಧಿಗಳಿಗೆ ‘ಭದ್ರತೆಯ ಖಾತರಿ’ ಆಗಿದೆಯೇ ಎಂದು ಪ್ರಶ್ನಿಸಿದ್ದಾರೆ.