ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಯಾವುದೇ ಬಲಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡಿನ್ನರ್ ಮೀಟಿಂಗ್ ಮೂಲಕ ಬಲಪ್ರದರ್ಶನ ಮಾಡುವ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದ್ದು ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದಿದ್ದಾರೆ.
ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ ಎಂದು ತಿಳಿಸಿದ್ದಾರೆ.
ನನ್ನ ಹಿಂದೆ ಯಾರೂ ಬರೋದು ಬೇಡ, ನನ್ನ ಪರ ಮಾತಾಡೋದು ಬೇಡ ಅಂದಿದ್ಯಾಕೆ ಡಿಕೆಶಿ

