ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾಖಲೆ ಸಂಗ್ರಹಕ್ಕೆಂದು ಜಾರಿ ನಿರ್ದೇಶನಾಲಯ ಮುಡಾಗೆ ಹೋಗಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು.
ದಾಖಲೆ ಪರಿಶೀಲನೆ ಮಾಡಬಹುದು. ಇ.ಡಿ.ಯವರು ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲ ದಾಖಲೆಗಳು ಸಾರ್ವಜನಿಕವಾಗಿವೆ ಎಂದು ಹೇಳಿದರು.