ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್‌ನ ಗಾಯಕಿ ಕಲ್ಪನಾ ರಾಘವೇಂದ್ರ ನಿದ್ರೆ ಮಾತ್ರೆಗಳನ್ನು ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿ ಮನೆ ಸೇರಿದ ಗಾಯಕಿ ತೆಲಂಗಾಣ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಗಾಯಕಿ ಕಲ್ಪನಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ರೂಮರ್ಸ್ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಗಾಯಕಿ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ ಎನ್ನಲಾಗಿದೆ.
ಕೆಲವು ಯೂಟ್ಯೂಬ್ ಚಾನೆಲ್‌ಗಳು ನಾನು ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಸುಳ್ಳು ಪ್ರಚಾರ ಮಾಡುತ್ತಿವೆ. ನನ್ನ ಖಾಸಗಿ ವಿಡಿಯೊಗಳನ್ನು ಸಹ ಅಪ್‌ಲೋಡ್ ಮಾಡುತ್ತಿವೆ. ಇದು ನನ್ನ ವೈಯಕ್ತಿಕ ಜೀವನಕ್ಕೆ ತೊಂದರೆ ಉಂಟು ಮಾಡಿದೆ ಎಂದು ಗಾಯಕಿ ಆರೋಪಿಸಿದ್ದಾರೆ.
ಒತ್ತಡದಿಂದಾಗಿ ನನಗೆ ನಿದ್ರೆ ಬರುತ್ತಿಲ್ಲ, ಅದಕ್ಕಾಗಿಯೇ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದೇನೆ. ಈ ಮಾತ್ರೆಗಳ ಮಿತಿ ಮೀರಿದ ಸೇವನೆಯಿಂದ ತಾನು ಪ್ರಜ್ಞೆ ತಪ್ಪಿದ್ದೇನೆ ಹೊರತು ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಹೇಳಿದ್ದಾರೆ.