ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್‌ಗೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ದಿನಗಳೇ ಕಳೆದಿದ್ದರೂ ಕುಟುಂಬದ ಯಾರೊಬ್ಬರು ಬಂದು ನೋಡಿಲ್ಲ ಎಂದು ಹೇಳಲಾಗಿತ್ತು.
ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬದವರು ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಆದರೆ ದರ್ಶನ್‌ನ್ನು ಮೀಟ್ ಮಾಡದೇ ವಾಪಾಸ್ ಹೋಗಿದ್ದಾರೆ.
ವಿಜಯಲಕ್ಷ್ಮಿ, ಮಗ ವಿನೀಶ್ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದು, ಜೈಲಿನ ಮುಂದೆ ಮಾಧ್ಯಮದ ಕ್ಯಾಮೆರಾಗಳನ್ನು ನೋಡುತ್ತಿದ್ದಂತೆಯೇ ವಾಪಾಸಾಗಿದ್ದಾರೆ ಎನ್ನಲಾಗಿದೆ.