ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಆಪರೇಷನ್ ಸಿಂದೂರ್ ಮೂಲಕ ಪಾಕ್ ನಲ್ಲಿ ಉಗ್ರರ ಅಡಗುದಾಣಗಳನ್ನು ಉಡೀಸ್ ಮಾಡಿ ಪ್ರತೀಕಾರ ತೀರಿಸಿತ್ತು. ಇತ್ತ ಭಾರತೀಯ ಸೇನೆಯೂ ಇಸ್ಲಮಾಬಾದ್ ನಲ್ಲಿ ನಡೆಸಿದ ಭೀಕರ ದಾಳಿಗೆ ತತ್ತರಿಸಿದ ಪಾಕಿಸ್ತಾನ ಪರಿಸ್ಥಿತಿ ಹೇಳ ತೀರಾದಾಗಿದೆ. ಭಾರತ ನಿರಂತರವಾಗಿ ದಾಳಿ ಮಾಡುತ್ತಿದ್ದರೆ ಇತ್ತ ದೇಶ ರಕ್ಷಿಸುವ ಬದಲು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಹೇಳಿಕೆ ನೀಡಿದ್ದು ಮುಜುಗರ ಕಾರಣವಾಗಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಖಾಸಗಿ ಸಂದರ್ಶನದಲ್ಲಿ ನಾವು ಭಾರತದ ಕ್ಷಿಪಣಿ ದಾಳಿಗಳನ್ನು ಏಕೆ ತಡೆಯಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಮಗೆ ದಾಳಿ ತಡೆಯುವ ಶಕ್ತಿ ಇದೆ. ಆದರೆ ನಾವು ವಿರೋಧ ಒಡ್ಡಿದರೆ ನಮ್ಮ ಶಸ್ತ್ರಾಸ್ತ್ರಗಳ ಸ್ಥಳವನ್ನು ಬಹಿರಂಗಪಡಿಸಿದಂತಾಗುತ್ತದೆ. ಇದು ದೇಶದ ಭದ್ರತೆಗೆ ಧಕ್ಕೆ ಬರುತ್ತದೆ ಎಂದು ಅವರು ಹೇಳಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಭಾರತ ಸಿಯಾಲ್‌ಕೋಟ್ ಮತ್ತು ಲಾಹೋರ್‌ನಲ್ಲಿರುವ ಪಾಕಿಸ್ತಾನ ಸೇನೆಯ ವಾಯು ರಕ್ಷಣಾ ಘಟಕದ ಮೇಲೆ ಭಾರತ ಮತ್ತೆ ದಾಳಿ ನಡೆಸಿದೆ. ಭಾರತದ 15 ನಗರಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಪ್ಲ್ಯಾನ್ ಮಾಡಿದ್ದು, ಆದರೆ ಭಾರತೀಯ ಸೇನೆಯು ಇದನ್ನು ವಿಫಲಗೊಳಿಸಿದೆ.
ಭಾರತ ತನ್ನ ಮೇಲಿನ ದಾಳಿಯನ್ನು ತಡೆ ಹಿಡಿದಿದೆ. ಪ್ರತಿದಾಳಿಯಲ್ಲಿ ಭಾರತ ಪಾಕಿಸ್ತಾನದ ಪ್ರಮುಖ 16 ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತ್ತು. LoC ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದೀಗ ಜಮ್ಮುವಿನ ಸಾಂಬಾ ಜಿಲ್ಲೆಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ತಿಳಿದು ಬಂದಿದೆ.