ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ: HDK ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿ ತನ್ನ ತನಿಖೆಯನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕುಮಾರಸ್ವಾಮಿ ರಾಜ್ಯಪಾಲರನ್ನು ಒತ್ತಾಯಿಸಿದರು.

ಹೆಚ್ ಡಿಕೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್. ಈ ಕುರಿತು ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ. ಮನವ ಸಂತಸಿಕೊಳ್ಳಿ’ ಎಂದು ಬಸವಣ್ಣನವರು ಹೇಳಿದ್ದಾರೆ. ಮೊದಲು ನಿಮ್ಮ ಮನೆಯನ್ನು ರಿಪೇರಿ ಮಾಡಿಕೊಳ್ಳಿ ಎಂದರು.

ಬೇರೆಯವರ ಬಗ್ಗೆ ಯಾಕೆ ಮಾತನಾಡುತ್ತಿದ್ದೀರಿ? ಬೇರೆಯವರ ಮನೆ ಕಟ್ಟುವ ಮೊದಲು ಸ್ವಂತ ಮನೆಯನ್ನು ಸರಿಪಡಿಸಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ಮೊದಲು ಅದನ್ನೇ ಅನುಸರಿಸೋಣ. ನಂತರ ಬೇರೆಯವರ ಬಗ್ಗೆ ಮಾತನಾಡೋಣ. ಎಸ್‌ಐಟಿಯವರು ತಮ್ಮ ಕೆಲಸವನ್ನು ಮಾಡುತ್ತಾರೆ, ಇನ್ನು ಮುಂದೆ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!