ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಫ್ಲೈಯಿಂಗ್ ಕಿಸ್ ನೀಡಿದ್ದು ತಪ್ಪಾ? ಸರಿಯಾ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.
ರಾಹುಲ್ ಗಾಂಧಿ ಅವರನ್ನು ಡಿಫೆಂಡ್ ಮಾಡುವ ನಿಟ್ಟಿನಲ್ಲಿ ಬಿಹಾರದ ಕಾಂಗ್ರೆಸ್ ಶಾಸಕಿ ರೀತು ಸಿಂಗ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಅವರ‍್ಯಾಕೆ ವಯಸ್ಸಾದವರಿಗೆ ಫ್ಲೈಯಿಂಗ್ ಕಿಸ್ ಕೊಡ್ತಾರೆ? ದೇಶದಲ್ಲಿ ಹುಡುಗಿಯರಿಗೆ ಬರ ಇಲ್ಲ ಎಂದು ಹೇಳಿದ್ದಾರೆ. ರಾಗಾ ವಿರೋಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಚರ್ಚೆ ವೇಳೆ ರಾಹುಲ್ ಮಾತು ಮುಗಿಸಿ ಹೊರನಡೆಯುವ ವೇಳೆ ರಾಹುಲ್ ಗಾಂಧಿ ಅವರು ಫ್ಲೈಯಿಂಗ್ ಕಿಸ್ ನೀಡಿದ್ದು ವಿವಾದ ಸೃಷ್ಟಿಸಿತ್ತು.