Monday, August 8, 2022

Latest Posts

“ಚುನಾವಣೆ ಗೆದ್ದಾಗ ಹೆಚ್’ಡಿಕೆ’ಗೆ ಅಲ್ಪಸಂಖ್ಯಾತರು ಏಕೆ ನೆನಪಾಗೋದಿಲ್ಲ?”

ಹೊಸದಿಗಂತ ವರದಿ, ಹುಬ್ಬಳ್ಳಿ:

ಗೆಲ್ಲುವ ಸಮಯದಲ್ಲಿ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರು ಏಕೆ ನೆನಪು ಬರುವುದಿಲ್ಲ. ಅಲ್ಪಸಂಖ್ಯಾತರನ್ನು ಬಲಿ‌ಕೊಡುವದೇ ಕುಮಾರಸ್ವಾಮು ಕೆಲಸ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಕುಮಾರಸ್ವಾಮಿ ಕೇವಲ ಅಲ್ಪಸಂಖ್ಯಾತರಿಗೆ ಅಷ್ಟೇ ಅಲ್ಲ, ಯಡಿಯೂರಪ್ಪನರವರಿಗೂ ಮೋಸ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ಅಧಿಕಾರ ಕೊಡಿ ಎಂದು ನಾನು ಕುಮಾರಸ್ವಾಮಿಗೆ ಹೇಳಿದ್ದೆ.
ಹೆಚ್.ಡಿ.ರೇವಣ್ಣ ಎಲ್ಲಿ ಉಪ ಮುಖ್ಯಮಂತ್ರಿ ಆಗ್ತಾನೆಂದು ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ.ಇದರ ಬಗ್ಗೆ ನನ್ನ ಬಳಿ ವಿಡಿಯೋ ದಾಖಲೆ ಇದೆ.ಕುಮಾರಸ್ವಾಮಿ ಸ್ವಂತ ಸಹೋದರನ ಏಳಿಗೆಯನ್ನ ಸಹಿಸಿಕೊಳ್ಳುವುದಿಲ್ಲ, ನಮ್ಮ ಏಳಿಗೆಯನ್ನ ಅವರು ಸಹಿಸಿಕೊಳ್ಳುವುದು ದೂರಿದ ಮಾತು. ಸೋಲುವ ಸಮಯದಲ್ಲಿ ಕುರಿ ಬಲಿ ಕೊಟ್ಟ ಹಾಗೆ, ಅಲ್ಪಸಂಖ್ಯಾತರನ್ನ ಬಲಿ ಕೋಡ್ತಾರೆ ಎಂದು ಕಿಡಿಕಾರಿದರು.
ಸಿಂದಗಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ತಾರೆ. ಹಾನಗಲ್‌ನಲ್ಲಿ ಶ್ರೀನಿವಾಸ ಮಾನೆ ಒಳ್ಳೆಯ ಕೆಲಸ ಮಾಡಿದ್ದಾರೆ.
ಶ್ರೀನಿವಾಸ ಮಾನೆ ಯಾರು ಮಾಡದ ಕೆಲಸ ಮಾಡಿದ್ದಾರೆ, ಅವರು ಜಯ ನಿಶ್ಚಿತ. ಸಿಎಂ ಉದಾಸಿ ರೈಟ್ ಪರ್ಸನ್, ರಾಂಗ ಪಾರ್ಟಿಯಲ್ಲಿದ್ದರು. ಬಿಜೆಪಿಯಿಂದ ಅವರ ಕುಟುಂಬಕ್ಕೆ ಟಿಕೆಟ್ ಬೀಡಬೇಕಾಗಿತ್ತು. ಉದಾಸಿ ಕುಟುಂಬಕ್ಕೆ ಟಿಕೇಟ್ ನೀಡದ ಕಾರಣಕ್ಕೆ ಅವರು ಸೋತು ಬಿಟ್ಟಿದ್ದಾರೆ. ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ.
ಬಸವಕಲ್ಯಾಣದಲ್ಲಿ ಜೆಡಿಎಸ್ ನೋಡಿ ಮತ ಹಾಕಿಲ್ಲಾ, ಅಲ್ಲಿನ ವ್ಯಕ್ತಿಯ ನೋಡಿ ಮತ ಹಾಕಿದ್ದಾರೆ. ಇದರಿಂದ ಅಲ್ಲಿ ಬಿಜೆಪಿ ಗೆಲ್ಲಲು ಸಹಾಯವಾಗಿದೆ.ಉಪಚುನಾವಣೆಯಲ್ಲಿ ಸೂಟ್‌ಕೇಸ್ ರಾಜಕಾರಣ ಮಾಡಿ, ಅಲ್ಪಸಂಖ್ಯಾತರನ್ನ ಬಲಿ ತೆಗೆದುಕೊಂಡಿದ್ದಾರೆ. ಹಾನಗಲ್‌ನಲ್ಲಿ ಸೂಟ್‌ಕೇಸ್ ಬರದ ಕಾರಣ ಒಂದೇ ದಿನ ಪ್ರಚಾರ ಮಾಡಿದ್ದಾರೆ.ಸೂಟ್‌ಕೇಸ್ ಪದ್ದತಿಯ ಬಗ್ಗೆ ನಾನು ಹೇಳ್ತಿಲ್ಲ, ದೇವೇಗೌಡ್ರ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss