ದೇವರು ಏಕೆ ಪ್ರಧಾನಿ ಮೋದಿಗೆ ಅದಾನಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ?: ರಾಹುಲ್ ಗಾಂಧಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇವರು ಏಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರಿಗೆ ಮಾತ್ರ ಸಹಾಯ ಮಾಡಲು ಹೇಳುತ್ತಿದ್ದಾನೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಹರಿಯಾಣದ ಅಂಬಾಲಾದಲ್ಲಿ ಪ್ರಚಾರ ನಡೆಸುತ್ತಿದ್ದ ರಾಹುಲ್ ಗಾಂಧಿ, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಜ್ವಲಂತವಾಗಿದ್ದರೂ ಇಂದು 20 ಲಕ್ಷ ಸರ್ಕಾರಿ ಉದ್ಯೋಗಗಳು ಏಕೆ ಖಾಲಿ ಇವೆ ಎಂದು ನಾನು ಕೇಂದ್ರ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಹರಿಯಾಣ ಸರ್ಕಾರವು ಜನರಿಗೆ ಈ ಉದ್ಯೋಗಗಳನ್ನು ಏಕೆ ಒದಗಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರಿಯಾಣಕ್ಕೆ ಭೇಟಿ ನೀಡಿ ಭಾಷಣ ಮಾಡಲು ಮತ್ತು ತಮಗೆ ಬೇಕಾದುದನ್ನು ಹೇಳಿ ಹೋಗುತ್ತಾರೆ. ಆದರೆ ಅವರು ಹರಿಯಾಣ ರಾಜ್ಯದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸುವುದಿಲ್ಲ ಎಂದು ಟೀಕಿಸಿದ್ದಾರೆ.

ನೀವೆಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ್ದೀರಿ. ಅವರು ದೇವರೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಾರೆ ಮತ್ತು ಅವರು ಸ್ವೀಕರಿಸುವ ಎಲ್ಲ ಆದೇಶವನ್ನು ಅನುಸರಿಸುತ್ತಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದರೆ, ಅದಾನಿಗೆ ಸಹಾಯ ಮಾಡಲು ದೇವರು ಏಕೆ ಎಲ್ಲಾ ಮೋದಿಗೆ ನೀಡುತ್ತಾನೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಕಾರ್ಪೊರೇಟ್ ಸಂಸ್ಥೆಗಳಿಗೆ ಬೇಕಾದಂತಹ ಕ್ರಮಗಳನ್ನೇ ತೆಗೆದುಕೊಳ್ಳುತ್ತಿದ್ದಾರೆ. ರೈತರ ಸಂಕಷ್ಟಗಳನ್ನು ಪರಿಹರಿಸುತ್ತಿಲ್ಲ. ಆದ್ರೆ ಕಾಂಗ್ರೆಸ್ ಹರಿಯಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸಲು ನಿರ್ಧರಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪ್ರತಿ ಸಮುದಾಯದ ಯುವಕರಿಗೆ 2 ಲಕ್ಷ ಉದ್ಯೋಗಗಳನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!