ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಇಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.
ಬಂದ್ ಯಾಕೆ?
ಕಳೆದ ತಿಂಗಳು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಚಲಿಸುತ್ತಿದ್ದ ಬಸ್ಸಿನ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಮರಾಠಿ ಪರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆಸಿದ್ದರು. ಈ ಘಟನೆಯ ನಂತರ, ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಅಂತರರಾಜ್ಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಕಂಡಕ್ಟರ್ ಮೇಲಿನ ದಾಳಿಯು ಎರಡು ರಾಜ್ಯಗಳ ನಡುವಿನ ಭಾಷಾ ವಿವಾದಗಳ ಬಗ್ಗೆ ಮತ್ತೆ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಮರಾಠಿ ಪರ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟವು ಈ ಬಂದ್‌ಗೆ ಕರೆ ನೀಡಿದೆ.
ಇಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಘೋಷಿಸಿದ್ದರು. ಇದು ಸರಿಯಾದ ಕ್ರಮವಲ್ಲ ಎಂದು ನಾವು ಅವರಿಗೆ ಹೇಳಲುಬಯಸುತ್ತೇವೆ. ಏಕೆಂದರೆ ಬಂದ್ನಿಂದ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವಿದರಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.
ಯಾವ ಸೇವೆ ಇದೆ? ಯಾವುದು ಇಲ್ಲ
ಕೆಎಸ್‌ಆರ್‌ಟಿಸಿ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿದ್ದು, ಇದು ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.
ಓಲಾ, ಉಬರ್‌ನಂತಹ ಕ್ಯಾಬ್ ಅಗ್ರಿಗೇಟರ್ಗಳು, ಕೆಲವು ರಿಕ್ಷಾ ಒಕ್ಕೂಟಗಳು ಸಹ ಬಂದ್‌ಗೆ ಬೆಂಬಲ ನೀಡಿವೆ. ಆದಾಗ್ಯೂ, ಮೆಟ್ರೋ, ರೈಲ್ವೆ ಮತ್ತು ವಿಮಾನ ನಿಲ್ದಾಣ ಸೇವೆಗಳು ಇರಲಿವೆ.
ಇಂದು ಶನಿವಾರವಾದ್ದರಿಂದ ಬ್ಯಾಂಕ್‌ಗಳು ಮುಚ್ಚಿರುತ್ತವೆ. ಕೆಲವು ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು ರಜೆ ಇರಬಹುದು, ಆದರೆ ಈ ವಿಚಾರವಾಗಿ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ.
ಸರ್ಕಾರಿ ಕಚೇರಿಗಳು ಸಹ ತೆರೆದಿರುತ್ತವೆ. ಆರೋಗ್ಯ ಸೇವೆ ಅಥವಾ ಇತರ ಅಗತ್ಯ ಸೇವೆಗಳನ್ನು ಒದಗಿಸುವ ಎಲ್ಲವೂ ಕಾರ್ಯನಿರ್ವಹಿಸುತ್ತವೆ. ಹಾಲು, ಅಗತ್ಯ ವಸ್ತುಗಳ ಪೂರೈಕೆ ಎಂದಿನಂತೆಯೇ ಇರಲಿದೆ.