ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಗ್ಯಾರಂಟಿಗಳು ನಡೆಯಲ್ಲ ಎಂದರೆ ಮೋದಿ ಯಾಕೆ ಗ್ಯಾರಂಟಿಗಳನ್ನು ಕಾಪಿ ಮಾಡ್ಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ ಅವರು, ನಮ್ಮ ಗ್ಯಾರಂಟಿ ನಡೆಯಲ್ಲ ಎಂದರೆ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿರೋದು ಯಾಕೆ? ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಅವುಗಳು ಮುಂದುವರಿಯಲಿವೆ, ಅಭಿವೃದ್ಧಿ ಕೂಡ ಆಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.