Sunday, January 11, 2026

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್ ಫೋನ್, ಇಂಟರ್ನೆಟ್ ಬಳಸಲ್ಲ ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಮ್ಮ ದಿನನಿತ್ಯದ ಕೆಲಸದಲ್ಲಿ ಮೊಬೈಲ್ ಫೋನ್ ಅಥವಾ ಇಂಟರ್ನೆಟ್ ಬಳಸುವುದಿಲ್ಲ ಯಾಕೆ ಎಂದು ತಿಳಿಸಿದ್ದಾರೆ.

ವಿಕಸಿತ ಭಾರತ ಯುವ ನಾಯಕರ ಸಂವಾದ 2026 ರ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಅವರಿಗೆ ನೀವು ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಬಳಸುವುದಿಲ್ಲವಂತೆ ನಿಜವೇ ಎಂದು ಕೇಳಲಾಯಿತು. ಇದಕ್ಕೆ ಅವರು ತಾವು ಫೋನ್ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಫೋನ್ ಅವಶ್ಯಕ. ಆದರೆ ನಾನು ಅದನ್ನು ಬಳಸದೆ ನನ್ನ ಕೆಲಸವನ್ನು ನಿರ್ವಹಿಸುತ್ತೇನೆ. ಸಂವಹನಕ್ಕೆ ಇತರ ಹಲವು ಮಾರ್ಗಗಳಿವೆ. ಜನರಿಗೆ ತಿಳಿದಿಲ್ಲದ ಕೆಲವು ಹೆಚ್ಚುವರಿ ವಿಧಾನಗಳನ್ನು ನಾವು ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.

ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯನ್ನು ಅಲಂಕರಿಸಿದ ಐದನೇ ವ್ಯಕ್ತಿಯಾಗಿರುವ ಅಜಿತ್ ದೋವೆಲ್, ಕೇರಳ ಕೇಡರ್‌ನ ನಿವೃತ್ತ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದಾರೆ. ಅವರು ಗುಪ್ತಚರ, ಆಂತರಿಕ ಭದ್ರತೆ ಮತ್ತು ಭಯೋತ್ಪಾದನಾ ನಿಗ್ರಹದಲ್ಲಿ ಹಲವು ದಶಕಗಳ ಕಾಲ ಕಾರ್ಯ ನಿರ್ವಹಿಸಿದ್ದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!