ಮಹಾರಾಜರ ಮನೆತನಕ್ಕೆ ಸರ್ಕಾರ ಯಾಕೆ ಅಪಮಾನ ಮಾಡ್ತಿದೆ?: ‘ಕೈ’ ವಿರುದ್ಧ HDK ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಅವರು ಇಡೀ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರೆ ಇಟ್ಟು ಬಿಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿಎಂ ಹೆಸರಿಡುವ ಮೂಲಕ ಮಹಾರಾಜರ ಕುಟುಂಬಕ್ಕೆ ಸರ್ಕಾರ ಅವಮಾನ ಮಾಡುತ್ತಿರುವುದು ಏಕೆ? ಈ ವಿಚಾರದಲ್ಲಿ ಸಿಎಂ ಮೌನವಾಗಿದ್ದಾರೆ. ತಮ್ಮ ಬೆಂಬಲಿಗರ ಛೂ ಬಿಟ್ಟು ರಸ್ತೆಗೆ ತಮ್ಮ ಹೆಸರಿಡಿಸಿಕೊಳ್ತಿದ್ದಾರೆ. ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ.

ಸಿದ್ದರಾಮಯ್ಯ ಅವರು ಇಡೀ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ರಾಜ್ಯಕ್ಕೆ ಅವರ ಹೆಸರಿಡೋಣ. ಮೈಸೂರಿಗೆ ನನ್ನ ಅವಧಿಯಲ್ಲೂ ಬಹಳ ಕೊಡುಗೆ ಕೊಟ್ಟಿದ್ದೇನೆ. ಹಾಗಂತ ನನ್ನ ಹೆಸರಿಡಿ ಎಂದು ಕೇಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!