ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ಕನ್ನಡಿಗರೇ ಬೇಕಿತ್ತೆ?: ವಿಜಯೇಂದ್ರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಖಾಸಗಿ ವಲಯದ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಗೆ ಸಂಬಂಧಿಸಿದಂತೆ ಗೊಂದಲದ ಸಂದೇಶಗಳನ್ನು ಹೊರಡಿಸಿ ಅಂತಿಮವಾಗಿ ಮಸೂದೆಯನ್ನು ಅಮಾನತುಗೊಳಿಸುವುದಾಗಿ ಘೋಷಿಸಿದೆ. ಸಾಮಾಜಿಕ ಎಕ್ಸ್‌ನಲ್ಲಿ ಸರ್ಕಾರದ ಆದೇಶವನ್ನು ಉದ್ದೇಶಿಸಿ, ಇದು “ಯು ಟರ್ನ್ ಸರ್ಕಾರ” ಎಂದು ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ? ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ @siddaramaiah ನವರ ನೇತೃತ್ವದ @INCKarnataka ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!