ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ ಬಳಿ ಹೆಚ್ಚು ಹಣವಿದೆ. ವಿಶ್ವದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಒಂದು. ಅವರ ಸುಂಕಗಳು ತುಂಬಾ ಹೆಚ್ಚಿರುವುದರಿಂದ ನಮ್ಮ ವಸ್ತುಗಳು ಅಲ್ಲಿಗೆ ಹೋಗುವುದು ಕಷ್ಟ ಎಂದು ಹೇಳಿದ್ದಾರೆ.
ಭಾರತ ಮತ್ತು ಪ್ರಧಾನ ಮಂತ್ರಿಯ ಬಗ್ಗೆ ನನಗೆ ತುಂಬಾ ಗೌರವವಿದೆ. ಆದರೆ ಮತದಾರರ ಮತದಾನಕ್ಕಾಗಿ 21 ಮಿಲಿಯನ್ ಡಾಲರ್ ಯಾಕೆ ನೀಡಬೇಕು ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.