ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ರೈತರಿಗೆ ಸಾಲು ಸಾಲು ಅನ್ಯಾಯ ಮಾಡಿದ ಬಿಜೆಪಿಯನ್ನು ರೈತರು ಯಾಕೆ ಬೆಂಬಲಿಸಬೇಕು? ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ.