ಸಿ ಟಿ ರವಿಯನ್ನು ರಾತ್ರಿಯೆಲ್ಲಾ ಸುತ್ತಾಡಿಸಿದ್ದೇಕೆ? ಬೆಳಗಾವಿ ಪೊಲೀಸರು ಹೇಳೋದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ಬಿಜೆಪಿ ಶಾಸಕರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ ಅವರನ್ನು ಸುತ್ತಾಡಿಸಿದ ವಿಚಾರವಾಗಿ ಚರ್ಚೆಗೆ ಕಾರಣವಾಗಿತ್ತು. ತಾವು ಸಿಟಿ ರವಿ ಅವರನ್ನು ರಾತ್ರಿಯಿಡಿ ಸುತ್ತಾಡಿಸಿದ್ದೇಕೆ ಎಂಬ ಬಗ್ಗೆ ಸ್ವತಃ ಬೆಳಗಾವಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಭದ್ರತಾ ಕಾರಣಗಳಿಗಾಗಿ ಮತ್ತು ಸಾರ್ವಜನಿಕರಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ಬಿಜೆಪಿ ಮುಖಂಡ ಸಿ.ಟಿ ರವಿ ಅವರನ್ನು ವಿವಿಧ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು ಎಂದು ಬೆಳಗಾವಿ ಪೊಲೀಸರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಡಿಸೆಂಬರ್ 19 ರಂದು ವಿಧಾನ ಪರಿಷತ್ ಸಭಾಂಗಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪದ ಮೇಲೆ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರವಿ ಅವರನ್ನು ಪೊಲೀಸರು ಬಂಧಿಸಲಾಗಿತ್ತು.

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯರ ಮರ್ಯಾದೆಗೆ ಧಕ್ಕೆ ತರುವ ಮಾತು, ಹಾವಭಾವ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರವಿಯನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಸಿಟಿ ರವಿ ರವರ ಭದ್ರತಾ ಅಂಶವನ್ನು ಪರಿಗಣಿಸಿ ಹಾಗೂ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಬಳಿ ಅಪಾರ ಜನಸ್ತೋಮ ಸೇರಿದ್ದರಿಂದ ಅವರನ್ನು ಖಾನಾಪೂರ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಯಿತು.

ಖಾನಾಪೂರದಲ್ಲಿಯೂ ಕೂಡ ಹೆಚ್ಚಿನ ಪ್ರಮಾಣದ ಮಾಧ್ಯಮ ಪ್ರತಿನಿಧಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಸೇರಿ ಗೊಂದಲದ ವಾತಾವರಣ ನಿರ್ಮಾಣ ಮಾಡಿದರು. ಅಲ್ಲದೇ ಹೆಚ್ಚುವರಿ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ಸಾಧ್ಯತೆ ಇದ್ದು. ಈ ಎಲ್ಲ ಅಂಶಗಳು ಸಹ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಸಾಮರ್ಥ್ಯ ಹೊಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!