Wednesday, January 14, 2026
Wednesday, January 14, 2026
spot_img

ಟಿ20 ವಿಶ್ವಕಪ್‌ ಟೂರ್ನಿಗೆ ಯಾಕೆ ಆಯ್ಕೆ ಆಗಿಲ್ಲ? ಶುಭಮನ್‌ ಗಿಲ್‌ ಕೊಟ್ರು ಉತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಆದ್ರೆ ಶುಭಮನ್‌ ಗಿಲ್‌ ಅವರನ್ನು ಆಯ್ಕೆ ಮಾಡಲಿಲ್ಲ. ಇದೀಗ ಇದೇ ಮೊದಲ ಬಾರಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಆಯ್ಕೆದಾರರ ನಿರ್ಧಾರವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

ಜನವರಿ 11 ರಂದು ನ್ಯೂಜಿಲೆಂಡ್‌ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶುಭಮನ್‌ ಗಿಲ್‌ ಮುನ್ನಡೆಸಲಿದ್ದಾರೆ. ಈ ಸರಣಿಯ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶುಭಮನ್‌ ಗಿಲ್‌ಗೆ ಪತ್ರಕರ್ತರು, ಟಿ20 ವಿಶ್ವಕಪ್‌ ಭಾರತ ತಂಡದಿಂದ ಕೈ ಬಿಟ್ಟ ಬಗ್ಗೆ ಪ್ರಶ್ನೆಯನ್ನು ಹಾಕಿದರು. ಆಯ್ಕೆದಾರರು ತೆಗೆದುಕೊಂಡಿರು ನಿರ್ಧಾರದಿಂದ ನಾನು ತೃಪ್ತಿಪಟ್ಟುಕೊಂಡಿದ್ದೇನೆ ಎಂದಿದ್ದಾರೆ.

ಮೊದಲನೆಯದಾಗಿ, ನನ್ನ ಜೀವನದಲ್ಲಿ ನಾನು ಎಲ್ಲಿ ಇರಬೇಕೋ ಅಲ್ಲೇ ಇದ್ದೇನೆ ಎಂಬುದು ನನ್ನ ನಂಬಿಕೆ. ನನ್ನ ಹಣೆಬರಹದಲ್ಲಿ ಏನೇ ಬರೆದಿದ್ದರೂ, ನಾನು ಅದನ್ನು ಸಾಧಿಸುತ್ತೇನೆ. ಒಬ್ಬ ಆಟಗಾರನಾಗಿ, ನನ್ನ ತಂಡಕ್ಕಾಗಿ ಪಂದ್ಯಗಳನ್ನು ಗೆಲ್ಲಲು ನಾನು ಬಯಸುತ್ತೇನೆ. ಇದರ ಜೊತೆಗೆ ಆಯ್ಕೆದಾರರ ನಿರ್ಧಾರವನ್ನೂ ನಾನು ಗೌರವಿಸುತ್ತೇನೆ. ಟಿ20 ತಂಡಕ್ಕೆ ನಾನು ಶುಭ ಹಾರೈಸುತ್ತೇನೆ. ಅವರು ವಿಶ್ವಕಪ್ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಗಿಲ್ ಹೇಳಿದ್ದಾರೆ.

2026ರ ಐಸಿಸಿ ಟಿ20 ವಿಶ್ವಕಪ್‌ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಇಶಾನ್‌ ಕಿಶನ್‌

Most Read

error: Content is protected !!