ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಶೂಟೌಟ್ ನಡೆದಿದೆ.
ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಿದ್ದ ದುಷ್ಕರ್ಮಿಗಳು ಡ್ರೈವಿಂಗ್ ಸೀಟನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು ಅನ್ನೋದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆದರೆ ದುಷ್ಕರ್ಮಿಗಳು ಫ್ರಂಟ್ ಸೀಟ್‌ನ್ನೇ ಟಾರ್ಗೆಟ್ ಮಾಡಿದ್ದು ಯಾಕೆ?
ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ದಾಳಿಕೋರರು ಫ್ರಂಟ್ ಸೀಟ್‌ನ್ನು ಟಾರ್ಗೆಟ್ ಮಾಡಿದ್ದರು. ಆದರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.