Saturday, October 1, 2022

Latest Posts

ನೀವ್ಯಾಕೆ ಕಾಂಗ್ರೆಸ್‌ಗೆ ಸೇರಬಾರ್ದು: ಹಳೆ ನೆನಪನ್ನು ಹಂಚಿಕೊಂಡ ಸಚಿವ ನಿತಿನ್ ಗಡ್ಕರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಹಿಂದೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸೇರುವಂತೆ ಆಹ್ವಾನ ಬಂದಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಶನಿವಾರ ವಾಣಿಜ್ಯೋದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ನಾಯಕರೊಂದಿಗಿನ ನಡೆಸಿದ್ದ ಸಂಭಾಷಣೆಯನ್ನು ಹಂಚಿಕೊಂಡರು.

ನನ್ನ ಸ್ನೇಹಿತ ಶ್ರೀಕಾಂತ್ ಜಿಚ್ಕರ್, ಅವರು ಆಗ ಕಾಂಗ್ರೆಸ್‌ನಲ್ಲಿದ್ದರು, ನೀವು ಒಳ್ಳೆಯ ವ್ಯಕ್ತಿ ಆದರೆ ತಪ್ಪು ಪಕ್ಷದಲ್ಲಿದ್ದೀರಿ, ಉತ್ತಮ ಭವಿಷ್ಯಕ್ಕಾಗಿ ನೀವು ಕಾಂಗ್ರೆಸ್‌ಗೆ ಸೇರಬೇಕು. ಆಗ ನಾನು ಶ್ರೀಕಾಂತ್‌ಗೆ ಹೇಳಿದ್ದೆ ಅಂಥದ್ದೇನಾದರೂ ಸ್ಥಿತಿ ಬಂದರೆ ನಾನು ಬಾವಿಗಾದರೂ ಹಾರುತ್ತೇನೆ. ಎಂದಿಗೂ ಕಾಂಗ್ರೆಸ್‌ ಪಕ್ಷ ಸೇರೋದಿಲ್ಲ’ ಎಂದು ಉತ್ತರಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ.

ನನ್ನ ಪಕ್ಷವು ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದ ಸಮಯದಲ್ಲೂ ನನ್ನ ನಿರ್ಧಾರ ಇದಾಗಿತ್ತು. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರು ಹಿಂದಿನ ಅಮೇರಿಕನ್ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಜೀವನಚರಿತ್ರೆಯನ್ನು ಉಲ್ಲೇಖಿಸಿ, ಯಾರಾದರೂ ಸೋಲು ಕಂಡಾಗ ಅವರ ಸಾಂಗತ್ಯವನ್ನು ಯಾರೂ ಕೂಡ ತೊರೆಯಬಾರದು ಎಂದು ಹೇಳಿದರು.

ಒಬ್ಬ ವ್ಯಕ್ತಿಯು ಯುದ್ಧದಲ್ಲಿ ಸೋತಾಗ ಅಲ್ಲ, ಅವನು ರಣರಂಗವನ್ನು ತ್ಯಜಿಸಿದಾಗ ಸೋಲು ಕಾಣುತ್ತಾನೆ. ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿ ಯಾವುದರಲ್ಲೇ ಆಗಲಿ ಮಾನವ ಸಂಬಂಧಗಳು ದೊಡ್ಡ ಶಕ್ತಿ ಎಂದು ಗಡ್ಕರಿ ಹೇಳಿದರು. ಆದ್ದರಿಂದ ಯಾರನ್ನೂ ಅಗತ್ಯವಿದ್ದಾಗ ಬಳಸಿಕೊಂಡು ಆಮೇಲೆ ಎಸೆಯಬಾರದು. ಅದು ನಿಮ್ಮ ಒಳ್ಳೆಯ ದಿನದಲ್ಲೇ ಆಗಿರಲಿ, ಕೆಟ್ಟ ದಿನದಲ್ಲೇ ಆಗಿರಲಿ. ಕಷ್ಟದಲ್ಲಿದ್ದಾಗ ಸಹಾಯ ಮಾಡಿದವರ ಕೈಯನ್ನು ಗಟ್ಟಿಯಾಗಿ ಹಿಡಿದುಕೊಳ್ಳಿ. ಸಂದರ್ಭಗಳಿಗೆ ಅನುಗುಣವಾಗಿ ಉದಯಿಸುತ್ತಿರುವ ಸೂರ್ಯನನ್ನು ಪೂಜಿಸಬೇಡಿ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!