ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ: ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ #RevokeMetroFareHike ಅಭಿಯಾನ ಆರಂಭಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಹ, ಮೆಟ್ರೋ ದರ ಏರಿಕೆ ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರವು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಮತ್ತು ಖಾಸಗಿ ವಾಹನಗಳನ್ನು ನಿರುತ್ಸಾಹಗೊಳಿಸುವ ಬದಲು, ಮೆಟ್ರೋ ದರ ಹೆಚ್ಚಳದ ಮೂಲಕ ಅದಕ್ಕೆ ತದ್ವಿರುದ್ಧವಾದದ್ದನ್ನು ಮಾಡುತ್ತಿದೆ. ಬೆಂಗಳೂರು ಮೆಟ್ರೋ ಪ್ರಯಾನ ದರ ದೇಶದ ಇತರ ಮೆಟ್ರೋಗಳಿಗೆ ಸಮನಾಗಿರಬೇಕು. ದೆಹಲಿಯಲ್ಲಿ ಪ್ರಯಾಣಿಕರು 12 ಕಿ.ಮೀ ಪ್ರಯಾಣಕ್ಕೆ 30 ರೂ. ಪಾವತಿಸಿದರೆ, ಬೆಂಗಳೂರಿನಲ್ಲಿ 60 ರೂ. ಪಾವತಿಸಬೇಕಾಗುತ್ತದೆ. ಇದು ದುಪ್ಪಟ್ಟು ಮೊತ್ತವಾಗಿದೆ. ಗರಿಷ್ಠ ದರವನ್ನು 60 ರಿಂದ 90 ರೂ.ಗಳಿಗೆ ಹೆಚ್ಚಿಸುವ ಮೂಲಕ ಸರಿಸುಮಾರು ಶೇ 50 ಹೆಚ್ಚಳವು ನ್ಯಾಯಸಮ್ಮತವಲ್ಲ. ದೇಶದ ಬೇರೆ ಯಾವುದೇ ಮೆಟ್ರೋ ಇಷ್ಟು ಹೆಚ್ಚಿನ ಶುಲ್ಕ ವಿಧಿಸುವುದಿಲ್ಲ. 60 ರೂ.ಗಿಂತ ಹೆಚ್ಚಿನ ದರ ಏರಿಕೆ ತುಂಬಾ ಹೆಚ್ಚಾಗಿದೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!