ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಕಳೆದ ರಾತ್ರಿ ಒಬ್ಬರು ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮುಂದಿನ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.