ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ: ನಾಳೆ‌ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಗುರುವಾರ (ಜೂ.26)ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ (ಜೂ.26) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಪ್ರವಾಹ ಮುನ್ನೆಚ್ಚರಿಕೆ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜನಜಾನುವಾರುಗಳ ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ವಿಭಾಗದ ಕಾರ್ಯಪಾಲಕ ಇಖಜಿನಿಯರ್ ಐ.ಕೆ‌.ಪುಟ್ಟಸ್ವಾಮಿ ಅವರು ತಿಳಿಸಿದ್ದಾರೆ.

ಜಲಾಶಯದಿಂದ ಬುಧವಾರ ಸಂಜೆಯಿಂದ 10ಸಾವಿರ ಕ್ಯುಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!