ಹೊಸದಿಗಂತ ವರದಿ, ಚಿಕ್ಕಮಗಳೂರು :
ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ 5 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜೂನ್ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜು ಆದೇಶಿಸಿದ್ದಾರೆ.
ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕುಗಳಿಗೆ ರಜೆ ಅನ್ವಯಿಸಲಿದೆ ಎಂದು ಅವರು ತಿಳಿಸಿದ್ದಾರೆ