ಹೊಸದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಜನ ಜೀವನ ತತ್ತರಿಸಿ ಹೋಗಿದೆ. ಉಡುಪಿ ನಗರವಂತೂ ಪೂರ್ಣ ಜಲಾವೃತಗೊಂಡಿದ್ದು, ಇಲ್ಲಿನ ಜನಜೀವನ, ವ್ಯವಹಾರಗಳೆಲ್ಲವೂ ಅಸ್ತವ್ಯಸ್ತಗೊಂಡಿದೆ.
ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ (ಜು.9) ಘೋಷಿಸಿರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಅಪರ ಜಿಲ್ಲಾಧಿಕಾರಿ ಮಮತಾ ಘೋಷಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ, ಘೋಷಿಸಿರುವುದಿಲ್ಲ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.