ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ನಾಳೆ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಹೊಸ ದಿಗಂತ ವರದಿ, ಅಂಕೋಲಾ:

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ಬುಧವಾರ ಜುಲೈ 6 ರಂದು ರಜೆ ಘೋಷಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ರ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಮಕ್ಕಳ ಹಿತ ದೃಷ್ಟಿಯಿಂದ ರಜೆ ಘೋಷಿಸಲಾಗಿದ್ದು ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಮಳೆಯ ಕಾರಣಮಂಗಳವಾರ ಸಹ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!