ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ , ರಾಜ್ಯಾದ್ಯಂತ ಮುಂದಿನ
24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48ಗಂಟೆಗಳಲ್ಲಿ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!