ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾ. ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಮಂಜುನಾಥ ಚೋಪಡೆ (5) ಮೃತ ಬಾಲಕ, ಬಸವರಾಜ್ ಅಂಗನವಾಡಿಗೆ ಹೊರಟಿದ್ದನು. ರಸ್ತೆ ದಾಟುವ ವೇಳೆ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಿಡಗುಂದಿಯ ಬಿಎಮ್‌ಎಸ್ ಶಾಲೆಯ ವಾಹನ ಹರಿದು ಬಸವರಾಜ್ ಮಂಜುನಾಥ ಚೋಪಡೆ ಮೃತಪಟ್ಟಿದ್ದಾರೆ. ಐದು ವರ್ಷದ ಮಗನ ಸಾವನ್ನು ಕಂಡು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ನಿಡಗುಂದಿ ಪಿಎಸ್‌ಐ ಶಿವಾನಂದ ಪಾಟೀಲ್ ಭೇಟಿ ನೀಡಿದ್ದು, ಪರಿಶೀಲಿಸಿದ್ದಾರೆ. ಈ ವೇಳೆ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.