ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಇಂದೋರ್‌ನಲ್ಲಿ ಪತಿಯೊಂದಿಗೆ ಜಗಳವಾಡಿದ ಮಹಿಳೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪತಿಯ ಜೊತೆ ಜಗಳವಾಡಿ ನೊಂದ 27 ವರ್ಷದ ಮಹಿಳೆ ತಾನು ವಾಸವಿದ್ದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ್ ಟೌನ್‍ಶಿಪ್‌ನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.
ಮಹಿಳೆ ಯಾವುದೇ ಭಯವಿಲ್ಲದೆ ಮಹಡಿಯಿಂದ ಜಿಗಿಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಪತಿಯೊಂದಿಗೆ ಜಗಳವಾಡಿದ ನಂತರ ಅವಳು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.