ಕೇಜ್ರಿವಾಲ್ ನೇರ ಭೇಟಿಗೆ ಪತ್ನಿಗೆ ಸಿಗದ ಅನುಮತಿ: ಇದು ಅಮಾನವೀಯ ನಡೆ ಎಂದ AAP!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ (Tihar Jail) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನೇರ ಭೇಟಿ ಮಾಡಲು ಪತ್ನಿ ಸುನೀತಾ (Sunita) ಅವರಿಗೆ ಅನುಮತಿ ನಿರಾಕರಿಸಲಾಗಿದೆ.

ಇದಕ್ಕೆ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಕಿಡಿಕಾರಿದ್ದು, ಇದು ಅಮಾನವೀಯ ನಡೆ ಶನಿವಾರ ಆರೋಪಿಸಿದ್ದಾರೆ.

ಅಪರಾಧಿಗಳು ಕುಟುಂಬಸ್ಥರನ್ನು ಭೇಟಿಯಾಗಲು ಜೈಲಿನಲ್ಲಿ ಅನುಮತಿ ಇದೆ. ಆದರೆ ಕೇಜ್ರಿವಾಲ್ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರವಿಂದ್ ಕೇಜ್ರಿವಾಲ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದವರು ತಮ್ಮ ಪತ್ನಿಯನ್ನು ನಡುವೆ ಗಾಜಿನಿಂದ ಕಿಟಕಿಯ ಮೂಲಕ ಭೇಟಿಯಾಗುವಂತೆ ಮಾಡುತ್ತಿದ್ದಾರೆ. ಇಂತಹ ಅಮಾನವೀಯ ವರ್ತನೆ ಏಕೆ? ಎಂದು ಸಂಜಯ್ ಸಿಂಗ್ ಪ್ರಶ್ನಿಸಿದರು. ನಮ್ಮನ್ನು ಅವಮಾನಿಸಲು ಮತ್ತು ನೈತಿಕತೆ ಸ್ಥೈರ್ಯ ಕುಗ್ಗಿಸಲು ಇದನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರ ಒತ್ತಾಯದ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಜೈಲಿನಲ್ಲಿ ಅವರು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ನಡುವಿನ ಸಭೆಯನ್ನು ಕೊನೆಯ ಕ್ಷಣದಲ್ಲಿ ಅಧಿಕಾರಿಗಳು ರದ್ದುಗೊಳಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ಸಹಾರಾ ಇಂಡಿಯಾದ ದಿವಂಗತ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತಾ ರಾಯ್ ಅವರು ತಿಹಾರ್‌ನಲ್ಲಿ ಇಂಟರ್‌ನೆಟ್, ಫೋನ್ ಮತ್ತು ಕಚೇರಿ ಸೌಲಭ್ಯಗಳನ್ನು ಹೊಂದಿದ್ದರು. ಚಂದ್ರ ಬ್ರದರ್ಸ್ಗೆ ಜೈಲು ಆವರಣದಲ್ಲಿ ನಿಯಮಿತ ಸಭೆಗಳನ್ನು ನಡೆಸಲು ಮತ್ತು ಫೈಲ್‌ಗಳಿಗೆ ಸಹಿ ಹಾಕಲು ಅವಕಾಶವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಬಗ್ಗೆ ನೀವು ಯಾಕೆ ಹೆದರುತ್ತೀರಿ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!