ವೈದ್ಯರ ಯಡವಟ್ಟಿಗೆ ಮಹಿಳೆ ಬಲಿ: ಬ್ಯಾಂಡೇಜ್‌ ಹೊಟ್ಟೆಯೊಳಗಿಟ್ಟು ಆಪರೇಷನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿ ಬ್ಯಾಂಡೇಜ್ ಬಿಟ್ಟು ಹೊಲಿಗೆ ಹಾಕಿದ್ದಾರೆ, ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ತನ್ನ ಪತ್ನಿಯನ್ನು ಆಪರೇಷನ್‌ಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂತ್ರಸ್ತೆಯ ಪತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಪರೇಷನ್ ಮಾಡಿದ ವೈದ್ಯರು ಅತ್ಯಂತ ನಿರ್ಲಕ್ಷ್ಯ ವಹಿಸಿ ಆಪರೇಷನ್ ವೇಳೆ ಪತ್ನಿಯ ಹೊಟ್ಟೆಗೆ ಬ್ಯಾಂಡೇಜ್ ಹಾಕಿ ಅಲ್ಲೇ ಬಿಟ್ಟು ಹೊಲಿಗೆ ಹಾಕಿದ್ದಾರೆ ಎಂದು ವಿವರಿಸಿದರು. ಈ ಘಟನೆಯಿಂದ ಸಂತ್ರಸ್ತೆಯ ಸಂಬಂಧಿಕರು ಮತ್ತು ಸ್ಥಳೀಯರು ಆಸ್ಪತ್ರೆ ಬಳಿ ಧರಣಿ ನಡೆಸಿದರು.  ವೈದ್ಯನನ್ನು ಕೂಡಲೇ ಬಂಧಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪೊಲೀಸರು ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಮಹಿಳೆ ಸಾವಿನ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವೃತ್ತಾಧಿಕಾರಿ ವಿಜಯ್ ರಾಣಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!