ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಿ ಕನಕಪುರದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.
ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಅಶ್ವಿನಿ ಕುಟುಂಬಸ್ಥರು ಅನಿಲ್ ವಿರುದ್ಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವೇಳೆ ಆರೋಪಿ ಅನಿಲ್‌ನನ್ನ ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಕನಕಪುರದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ, ಇಂದು ತೀರ್ಪು ಪ್ರಕಟ ಮಾಡಿದೆ. ವರದಕ್ಷಿಣೆ ಕಿರುಕುಳ ಆರೋಪ ಸಾಬೀತಾದ ಹಿನ್ನೆಲೆ ಅನಿಲ್‌ಗೆ ಜೀವಾವಧಿ ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.