Monday, October 6, 2025

SHOCKING | ಅಶ್ಲೀಲ ವಿಡಿಯೋ ತೋರಿಸಿ ಒತ್ತಾಯ: ಗಂಡನನ್ನು ಕೊಂದ ಪತ್ನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೊಬೈಲ್ ಫೋನ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಆರೋಪಿ ಮಹಾದೇವಿಯ ಪತಿ ರಮೇಶ್ (51) ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗಿದ್ದು, ವಿಡಿಯೋದಲ್ಲಿ ತೋರಿಸಿರುವಂತೆ ಮಾಡುವಂತೆ ಪತ್ನಿಯ ಮೇಲೆ ಒತ್ತಡ ಹೇರಿದ್ದಾನೆ ಎನ್ನಲಾಗಿದೆ.

ಈ ವಿಷಯವಾಗಿ ಇಬ್ಬರ ನಡುವೆ ಜಗಳ ನಡೆದು, ಅದು ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಮಹಾದೇವಿ ರಮೇಶ್ ತಲೆಗೆ ಕುಟ್ಟಾಣಿಯಿಂದ ಹೊಡೆದಿದ್ದಾರೆ. ನಂತರ ಆತ ಕೆಳಗೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ರಮೇಶ್‌ನನ್ನು ಕೊಂದ ನಂತರ ಮಹಾದೇವಿ ಮುನಿರಾಬಾದ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾಳೆ. ಲೈಂಗಿಕ ಕಿರುಕುಳ ಮತ್ತು ಆರ್ಥಿಕ ದೌರ್ಜನ್ಯಕ್ಕಾಗಿ ರಮೇಶ್ ನನ್ನು ಕೊಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.