ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಓಡಿಹೋದ ಕಾರಣದಿಂದ ನೊಂದ 37 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯು ಮನೆಯಿಂದ ಹೊರಡುವ ಮುನ್ನ ಬರೆದಿರುವ ಪತ್ರದಲ್ಲಿ, ಆತನೊಂದಿಗೆ ಇರಲು ಇಷ್ಟವಿಲ್ಲ ಮತ್ತು ವಿಚ್ಛೇದನ ನೀಡಲು ಬಯಸುತ್ತೇನೆ. ತನ್ನನ್ನು ಹುಡುಕಬೇಡಿ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಂಗಳವಾರ ಲೋಕೇಶ್ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ನಂತರ, ಅವರು ತಮ್ಮ ಮಗಳು ನಿಹಾರಿಕಾ ಜೊತೆ ಕಾರಿನಲ್ಲಿ ಮನೆಯಿಂದ ಹೊರಟರು. ದಂಪತಿ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು.
ಮಗಳನ್ನು ಬೇಕರಿಗೆ ಕರೆದೊಯ್ದು, ಆಕೆಗೆ ಇಷ್ಟವಾದ ವಸ್ತುಗಳನ್ನು ತಿನ್ನಿಸಿದ್ದಾರೆ. ನಂತರ, ಕಾರಿನೊಳಗೆ ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

